ರೋಡ್ ರೇಜ್ ಕಿಡಿಗೇಡಿಗಳ ವಿರುದ್ಧ ರೌಡಿಪಟ್ಟಿ; ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ

B.dayanand
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆಯಲ್ಲಿ ವಾಹನ ಚಾಲಕ, ಸವಾರರನ್ನು ಅಡ್ಡಗಟ್ಟಿ ಗಲಾಟೆ ಮಾಡುವ ಕಿಡಿಗೇಡಿಗಳ ವಿರುದ್ಧ ರೌಡಿಪಟ್ಟಿ ತೆರೆಯುವುದಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ನಗರದ ರಸ್ತೆಗಳಲ್ಲಿ ವಾಹನ ಸಂಚರಿಸುವ ಸಮಯದಲ್ಲಿ ಸಣ್ಣ ಅಪಘಾತ, ದಾರಿ ಬಿಡುವ ವಿಷಯ ಇಲ್ಲವೇ ಸಣ್ಣಪುಟ್ಟ ವಿಷಯಕ್ಕೆ ವಾಹನಗಳನ್ನು ಅಡ್ಡಗಟ್ಟಿ ಗಲಾಟೆ ಮಾಡುವುದು, ಧಮ್ಕಿ ಹಾಕುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಕೆಲ ಕಿಡಿಗೇಡಿ ಬೈಕ್ ಸವಾರರೇ ಹೆಚ್ಚಾಗಿ ರಸ್ತೆಯಲ್ಲಿ ಗಲಾಟೆ ಮಾಡುವ ಕೃತ್ಯಗಳು ಬೆಳಕಿಗೆ ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು, ಜಾಲತಾಣದಲ್ಲಿ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಬಿ. ದಯಾನಂದ್, ರೋಡ್ ರೇಜ್ ಕೃತ್ಯದಲ್ಲಿ ಎಸಗುವ ಕಿಡಿಗೇಡಿಗಳ ವಿರುದ್ಧ ಮುಲಾಜಿಲ್ಲದೆ ರೌಡಿಶೀಟ್ ತೆಗೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿನಾಕಾರಣ ಗಲಾಟೆ ಮಾಡಿ ಶಾಂತಿ ಕದಡುವ ಮತ್ತು ಸುಲಿಗೆ ಮಾಡುವುದು ಮಾಡಿದರೇ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ. ಅಂತವರ ವಿರುದ್ಧ ದೂರು ಕೊಡುವಂತೆ ದಯಾನಂದ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net