

RCB : ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳಿಂದ ಜಯಗಳಿಸಿತು. ಆರ್‌ಸಿಬಿಯ ಈ ಐತಿಹಾಸಿಕ ಗೆಲುವಿನ ನಂತರ ಅಭಿಮಾನಿಗಳ ಸಂತಸ ಮನೆ ಮಾಡಿದೆ. ಆರ್‌ಸಿಬಿ ಗೆದ್ದ ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನೊಪ್ಪಿದ್ದಾನೆ. ಈ ಘಟನೆ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು. ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ: ಅಭಿಮಾನಿ ಸ್ಥಳದಲ್ಲೇ ಸಾವು
ಶಿವಮೊಗ್ಗದಲ್ಲಿ ಆರ್‌ಸಿಬಿ ವಿಜಯೋತ್ಸವಕ್ಕಾಗಿ ಯುವಕರ ಗುಂಪು ಬೈಕ್ ರ್ಯಾಲಿಯನ್ನು ಏರ್ಪಡಿಸಿತ್ತು. ಈ ಮೆರವಣಿಗೆಯ ವೇಳೆ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ತೀವು ಗಾಯಗೊಂಡ ಯುವಕ ಸ್ಥಳದಲ್ಲೇ ವೆಂಕಟೇಶ್ ನಗರದ ನಿವಾಸಿ ಅಭಿನಂದನ್ (21) ಮೃತಪಟ್ಟಿದ್ದಾನೆ.
ಅಪಘಾತ ನಡೆದ ತಕ್ಷಣ ಸ್ನೇಹಿತರು ಸಹಾಯ ಮಾಡಲು ಧಾವಿಸಿದರು, ಆದರೆ ಅಭಿನಂದನ್ ಪ್ರಾಣಪಕ್ಷಿ ಆಗಲೇ ಹಾರಿಹೋಗಿತ್ತು. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.