ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂ.ಜನರ ಜೇಬಿಗೆ|Sadhana Samavesha

ssss
Published on

ಬೆಂಗಳೂರು: ನುಡಿದಂತೆ ನಡೆದ ಸರ್ಕಾರ ಎಂಬುದನ್ನು ಸಾಬೀತುಪಡಿಸಲು ಸರ್ಕಾರದ ಎರಡು ವಷಗಳ ‘ಪ್ರಗತಿ ವರದಿ’ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈರದೇನಹಳ್ಳಿಯಲ್ಲಿ ನಡೆದ ಚೊಚ್ಚಲ ಸಾಧನಾ ಸಮಾವೇಶ(The government's two-year 'Progress Report' was presented to the people at the Sadhana Samavesha) ದಲ್ಲಿ ಜನರ ಮುಂದಿಡಲಾಯಿತು.

ಗ್ಯಾರಂಟಿ ಯೋಜನೆಗಳು, ಅವುಗಳಿಂದಾಗಿರುವ ಪ್ರಯೋಜನಗಳು, ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿದ ಪರಿಗಳನ್ನು ಸಮಾವೇಶದಲ್ಲಿ ಪ್ರಸ್ತುತಪಡಿಸಲಾಯಿತು.

ಖುದ್ದು ಸಿಎಂ ಸಿದ್ದರಾಮಯ್ಯ(CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಆದಿಯಾಗಿ ಘಟಾನುಘಟಿ ಸಚಿವರು ಸರ್ಕಾರದ ಸಾಧನೆಗಳನ್ನು ಜನರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟರು. ಸಹಸ್ರಾರು ಜನ ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿ ತಮ್ಮ ಸರ್ಕಾರ ಬರೀ ಗ್ಯಾರಂಟಿ ಮಾತ್ರವಲ್ಲ, ಅಭಿವೃದ್ಧಿಗೂ ಆದ್ಯತೆ ನೀಡಿದೆ ಎಂಬುದನ್ನು ಸಾರಿ ಹೇಳಿದರು.

80 ಸಾವಿರ ಕೋಟಿ ರೂ. ಖರ್ಚು

ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿಗಳ ಮೂಲಕ ಇಲ್ಲಿಯವರೆಗೆ 80 ಸಾವಿರ ಕೋಟಿ ರೂ. ಜನರ ಜೇಬಿಗೆ ಹಾಕಿದ್ದೇವೆ ಎಂದು ತಿಳಿಸಿದರು.

ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು.

ಬಿಜೆಪಿ ಕನ್ನಡಕ ಕ್ಲೀನ್ ಮಾಡಿಕೊಳ್ಳಲಿ

ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್‌ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂ. ವೆಚ್ಚ ಮಾಡಿದ್ದೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net