RSS ಕೇಂದ್ರ ಕಚೇರಿ ದಾಳಿಯ ಸಂಚುಕೋರ; ಲಷ್ಕರ್‌ನ ಪ್ರಮುಖ ಭಯೋತ್ಪಾದಕ ‘ಸೈಫುಲ್ಲಾ’ ಹತ್ಯೆ| Saifullah

saifulla
Published on

ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಭಯೋತ್ಪಾದಕ ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಸೈಫುಲ್ಲಾ ಅವರನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ದಾಳಿಕೋರರು ಕೊಂದಿದ್ದಾರೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ವಿನೋದ್ ಕುಮಾರ್, ಮೊಹಮ್ಮದ್ ಸಲೀಂ, ಖಾಲಿದ್, ವನಿಯಾಲ್, ವಾಜಿದ್ ಮತ್ತು ಸಲೀಂ ಭಾಯ್ ಸೇರಿದಂತೆ ಬಹು ಅಲಿಯಾಸ್‌ಗಳಿಂದ ಕರೆಯಲ್ಪಡುವ ಸೈಫುಲ್ಲಾ, ಎಲ್‌ಇಟಿಯ ಕಾರ್ಯಾಚರಣೆಗಳು, ನೇಮಕಾತಿ, ನಿಧಿಸಂಗ್ರಹಣೆ ಮತ್ತು ಗಡಿಯಾಚೆಗಿನ ಒಳನುಸುಳುವಿಕೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ.

ಸೈಫುಲ್ಲಾ ಭಯೋತ್ಪಾದಕ ಸಂಘಟನೆಯ ಕಾರ್ಯಾಚರಣೆ ಕಮಾಂಡರ್ ಅಜಮ್ ಚೀಮಾ ಅಲಿಯಾಸ್ ಬಾಬಾಜಿಯ ಆಪ್ತ ಸಹಾಯಕನಾಗಿದ್ದ. ವಿನೋದ್ ಕುಮಾರ್ ಎಂಬ ಹೆಸರಿನಲ್ಲಿ ನೇಪಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈತ ನಗ್ಮಾ ಬಾನು ಎಂಬ ನೇಪಾಳಿ ಹುಡುಗಿಯನ್ನು ಮದುವೆಯಾಗಿದ್ದ.

ಸೈಫುಲ್ಲಾ ನೇಪಾಳದಲ್ಲಿದ್ದುಕೊಂಡು ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡ್ತಿದ್ದ. ಆತ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆಗೂ ಸಂಬಂಧ ಹೊಂದಿದ್ದ. ಈತನನ್ನು ಭಾರತೀಯ ಭದ್ರತಾ ಸಂಸ್ಥೆಗಳ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಸೇರಿಸಲಾಗಿತ್ತು.

(ಏಜೆನ್ಸೀಸ್)

2006 ರಲ್ಲಿ ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಮೇಲಿನ ದಾಳಿಯಲ್ಲಿ ಅವರು ಭಾಗಿಯಾಗಿದ್ದ. ಇದಲ್ಲದೆ, ರಾಂಪುರದಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದನು. ಬೆಂಗಳೂರಿನ ಐಐಎಸ್‌ಸಿ ಮೇಲಿನ ದಾಳಿಯ ಪಿತೂರಿಯಲ್ಲೂ ಇವನು ಭಾಗಿಯಾಗಿದ್ದನು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net