ಆರ್​ಎಸ್​ಎಸ್ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ; 10 ಮಂದಿಯನ್ನು ಬಂಧಿಸಿದ ಪೊಲೀಸರು

RSS (1)
Published on

ಹಾವೇರಿ: ಪಟ್ಟಣದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ ನಡೆಸೋ ವಿಚಾರವಾಗಿ ವೀಕ್ಷಣೆಗೆ ತೆರಳಿದ್ದ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಓರ್ವ ಆರ್​ಎಸ್​​ಎಸ್​ ಕಾರ್ಯಕರ್ತನ ತಲೆಗೆ ಗಾಯವಾಗಿದ್ದು, ನಾಳ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆಯುತ್ತಿರುವ ಪ್ರಶಿಕ್ಷಾ ವರ್ಗಕ್ಕೆ ಆರ್​ಎಸ್​ಎಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಅನ್ಯಕೋಮಿನ ಯುವಕರು ಬಂದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

ಗಲಾಟೆ ವೇಳೆ ಕೆಲವು ವಾಹನಗಳಿಗೆ ಹಾನಿಯಾಗಿದೆ. ಗಲಾಟೆ ಬಿಗುಡಾಯಿಸುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಗಾಯಾಳುಗಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ಯಕೋಮಿನ ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಎಸ್​​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ. ಸದ್ಯ ಪಟ್ಟಣದಲ್ಲಿ ಶಾಂತವಾಗಿದ್ದು, ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net