ಆರ್‌ಟಿಇ ಅರ್ಜಿ ಸಲ್ಲಿಕೆಗೆ ಅವಕಾಶ; ವೆಬ್​ಸೈಟ್​ನಲ್ಲಿ ಶಾಲೆಗಳ ಪಟ್ಟಿ ಬಿಡುಗಡೆ

RTE
Published on

ಬೆಂಗಳೂರು: ಶಿಕ್ಷಣ ಇಲಾಖೆಯು 2022-23ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ದಾಖಲಾತಿ ಅರ್ಜಿ ಆಹ್ವಾನಿಸಿದೆ. ಪಾಲಕರು ಮಾ.3ರವರೆಗೆ ಅರ್ಜಿ ಸಲ್ಲಿಸಬಹುದು. ಶಿಕ್ಷಣ ಇಲಾಖೆಯು ನೆರೆ-ಹೊರೆ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಾಲಕರು ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿರುವ ಶಾಲೆಗಳ ಪಟ್ಟಿಯನ್ನು ವೀಕ್ಷಿಸಬಹುದು.

ಕಳೆದ ಮೂರು-ನಾಲ್ಕು ವರ್ಷದಿಂದ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆ ಎಲ್ಲಿ ಇಲ್ಲವೋ ಅಥವಾ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಸೀಟುಗಳನ್ನು ನೀಡುತ್ತಿದೆ. ಇದರಿಂದ ಅರ್ಜಿ ಸಲ್ಲಿಸುವ ವೇಳೆ ತಮ್ಮ ವ್ಯಾಪ್ತಿ ಪ್ರದೇಶದಲ್ಲಿರುವ ಆರ್‌ಟಿಇಗೆ ಒಳಪಡುವ ಖಾಸಗಿ ಶಾಲೆಗಳನ್ನು ಪರಿಶೀಲಿಸಿ ಆನಂತರ ಆದ್ಯತೆ ಮೇರೆಗೆ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ http://www.schooleducation.kar.nic.in/ ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net