ಆರ್‌ಟಿಇ ವೇಳಾಪಟ್ಟಿ ಪರಿಷ್ಕರಣೆ; ಅರ್ಜಿ ಸಲ್ಲಿಕೆ ಅವಕಾಶ ಎಷ್ಟು ದಿನ?

RTE
Published on

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಅಂತೆಯೇ ಮಾ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25ರಂದು ಪ್ರಕಟಿಸಲಿದೆ. ಆನ್‌ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯು ಏ.4ರಂದು ನಡೆಸಲಿದೆ. ಈ ಸುತ್ತಿನಲ್ಲಿ ಆಯ್ಕೆಯಾದ ಮಕ್ಕಳ ದಾಖಲಾತಿಗೆ ಏ.16 ಕೊನೆಯ ದಿನವಾಗಿರಲಿದೆ.

ಏ.4ರಂದು ಎರಡನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ http://www.schooleducation.kar.nic.in/ ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net