ಕ್ರೀಡೆಯಿಂದ ದೈಹಿಕವಾಗಿ ಸದೃಢರಾಗಲು ಸಾಧ್ಯ; ಸಿ.ಎ. ಹರಿಹರ

30-RNR-03
Published on

ರಾಣೆಬೆನ್ನೂರ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಪ್ರಾಚಾರ್ಯ ಸಿ.ಎ. ಹರಿಹರ ಹೇಳಿದರು.
ನಗರದ ಆರ್‌ಟಿಇಎಸ್ ಮಹಾವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೆ ಕಳೆಯುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಮೊಬೈಲ್ ಬಿಟ್ಟು ಪುಸ್ತಕ ಹಿಡಿಯಬೇಕು. ಅಂದಾಗ ಶೈಕ್ಷಣಿಕ ಪ್ರಗತಿ ಸಾಧಿಸಿ ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದರು.
ಸಂಪನ್ಮೂಲ ವ್ಯಕ್ತಿ ರಮೇಶ ಬಡಿಗೇರ, ಹೇಮಗಿರಿ ಅಂಗಡಿ, ಡಾ. ಮುನಾವರಿ ಅಲಿಖಾನ ಸೌದಾಗರ, ಡಾ. ಸರಸ್ವತಿ ಬಮ್ಮನಾಳ, ಡಾ. ಮಧುಕುಮಾರ ಆರ್., ಅಂಜನಾ ಪವಾರ ಹಾಗೂ ವಿವಿಧ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net