ಹೆಚ್ಚು ಆರ್‌ಟಿಐ ಬಳಸುವವರ ಮಾಹಿತಿ ಸಂಗ್ರಹಕ್ಕಿಳಿದ ಸರ್ಕಾರ

Vidhanasoudha
Published on

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ಬಳಸಿ ಅರ್ಜಿ ಸಲ್ಲಿಸುವವರ ಪೈಕಿ ಹೆಚ್ಚೆಚ್ಚು ಅರ್ಜಿ ಹಾಕುವವರ ಮಾಹಿತಿ ಕಲೆ ಹಾಕಲು ಸರ್ಕಾರ ನಿರ್ಧರಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)ಯ ಪ್ರಧಾನ ಕಾರ್ಯದರ್ಶಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ಕಳಿಸಿದ್ದು, ಮೂರು ತಿಂಗಳ ಅವಧಿಯಲ್ಲಿ ಹೆಚ್ಚು ಆರ್‌ಟಿಐ ಅರ್ಜಿ ಸಲ್ಲಿಸುವ ಅರ್ಜಿದಾರರ ಮಾಹಿತಿಯನ್ನು ಸಂಗ್ರಹಿಸಿ ಪಟ್ಟಿ ಮಾಡಿ ಕಳಿಸುವಂತೆ ಸೂಚಿಸಿದೆ.

ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಇಲಾಖೆ, ನಿಗಮ ಮಂಡಳಿಗಳಿಂದ ಮಾಹಿತಿ ಪಡೆದು ಕ್ರೋಡೀಕರಿಸಿ ಇಮೇಲ್ ಮೂಲಕ ಕಳಿಸಲು ತಿಳಿಸಲಾಗಿದೆ.

ಈ ಸೂಚನೆಯಂತೆ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಅಧೀನ ಅಧಿಕಾರಿಗಳಿಗೆ ಸೂಚನೆ ಕಳಿಸಿವೆ. ಖಜಾನೆ ಇಲಾಖೆಯು ಎಲ್ಲಾ ಖಜಾನೆಗಳ ಪ್ರಭಾರಾಧಿಕಾರಿಗಳಿಗೆ ಸೂಚನೆ ಕಳಿಸಿದ್ದು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು ಆರ್‌ಟಿಐ ಅರ್ಜಿದಾರರ ಮಾಹಿತಿಯನ್ನು ಕ್ರೋಡೀಕರಿಸಿ ಖಜಾನೆ ಆಯುಕ್ತಾಲಯಕ್ಕೆ ಈ ಮೇಲ್ ಮೂಲಕ ಕಳಿಸಲು ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net