ಪಶ್ಚಿಮ ಬಂಗಾಳದ ಜನರಿಗೆ ಕೇಂದ್ರ ಸರ್ಕಾರ ನೀಡಿದ ಎಚ್ಚರಿಕೆ ಏನು?

west bengala
Published on

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಚಟುವಟಿಕೆ ನಡೆಸುತ್ರಿರುವುದಕ್ಕೆ ಕೇಂದ್ರ ಗೃಹ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.

ಕರೊನಾ ವೈರಸ್​ ಹರಡುವಿಕೆ ನಿಯಂತ್ರಣಕ್ಕೆ ಬರುವವರೆಗೂ ಲಾಕ್​ಡೌನ್​ ನಿಯಮ ಉಲ್ಲಂಘಿಸದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರವನ್ನೂ ಕೂಡ ಬರೆದಿದೆ.

ಜನರು ಲಾಕ್​ಡೌನ್​ ನಿಯಮ ಉಲ್ಲಂಘಿಷಿ ಮನೆಯಿಂದ ಹೊರ ಬರುತ್ತಿದ್ದಾರೆ. ಮೈದಾನದಲ್ಲಿ ಕ್ರಿಕೆಟ್​ ಆಡುತ್ತಿದ್ದಾರೆ. ನದಿಗಳಲ್ಲಿ ಸ್ನಾನ ಮಾಡುತ್ತಿದ್ದಾರೆ. ಮಾರುಕಟ್ಟೆಗಳು ಜನರಿಂದ ಕಿಕ್ಕಿರಿದಿವೆ.

ವಾಹನ ಸಂಚಾರ ನಿಷೇಧಿಸಿದ್ದರೂ ಆಟೋಗಳು ಬೀದಿಗಿಳಿದಿವೆ. ಜನರು ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಕರೊನಾ ವೈರಸ್​ ಹರಡಬಹುದು; ಹೀಗಾಗಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಜರುಗಿಸಿ ಎಂದು ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net