

Rahul Gandhi: ಸಂಸತ್ತಿನ ಮುಂಗಾರು ಅಧಿವೇಶನ(Monsoon session)ದಲ್ಲಿ ಕೇಂದ್ರ ಸರ್ಕಾರ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ''ಪ್ರಶ್ನೆ ಏನೆಂದರೆ ರಕ್ಷಣಾ ಸಚಿವರಿಗೆ ಸದನದಲ್ಲಿ ಮಾತನಾಡಲು ಅವಕಾಶವಿದೆ. ಅದರೆ, ವಿಪಕ್ಷ ನಾಯಕ ನನಗೆ ಸೇರಿದಂತೆ ವಿರೋಧ ಪಕ್ಷದ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಆಡಳಿತ ಪಕ್ಷ ಅವಕಾಶ ನೀಡುತ್ತಿಲ್ಲ. ಇದು ಕೇಂದ್ರದ ಹೊಸ ವಿಧಾನ ಎಂದು ಎನ್ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದರು.
ಅಧಿವೇಶನದಲ್ಲಿ ಕಾಂಗ್ರೆಸ್ ಮತ್ತು ಇತರೆ ಪಕ್ಷಗಳು ಅಪರೇಷನ್ ಸಿಂಧೂರ(Operation Sindhoora) ಸೇರಿ ಭಾರತದ ಪ್ರಮುಖ 8 ಸಮಸ್ಯೆಗಳನ್ನು ಬಗ್ಗೆ ಪ್ರಶ್ನೆ ಮಾಡಬೇಕಾಗಿತ್ತು. ಅಲ್ಲದೆ, ಇದರಲ್ಲಿ ಪಹಲ್ಗಾಮ್ ಉಗ್ರದಾಳಿ ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಸೇರಿದ್ದವು ಎಂದರು.
ಆಪರೇಷನ್ ಸಿಂಧೂರ ವಿಷಯದಲ್ಲಿ ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು(Kiren Rijiju) ಅವರು ಹೇಳಿಕೆಯನ್ನು ಸಂಸದೆ ಪ್ರಿಯಾಂಕಾ ವಾದ್ರಾ(Priyanka Vadra) ಉಲ್ಲೇಖಿಸಿದರು. ಕೇಂದ್ರ ಸರ್ಕಾರ ಚರ್ಚೆಗೆ ಸಿದ್ಧವಿದ್ದರೆ ವಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಪ್ರಿಯಾಂಕಾ ಆಗ್ರಹಿಸಿದರು.