ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಮಂಜೂರು

siddaramaiah
cm siddaramaiah request
Published on

ಮಂಗಳೂರು: ಕರಾವಳಿಯಲ್ಲಿ ಹತ್ಯೆಗೀಡಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಮಂಜೂರು ಮಾಡಿದೆ. ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾಗಿದ್ದರು ಎನ್ನಲಾದವರ ಕುಟುಂಬಕ್ಕೆ ಈ ಪರಿಹಾರ ಘೋಷಣೆ ಮಾಡಲಾಗಿತ್ತು.

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಮೊಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಈ ಪರಿಹಾರ ಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ವಿವಿಧ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಧನ ಮಂಜೂರು ಮಾಡುವಂತೆ ಡಿಜಿ-ಐಜಿಪಿ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಪರಿಹಾರ ಮಂಜೂರು ಮಾಡಲಾಗಿದೆ. ಜೂ. 19ರ ಬೆಳಗ್ಗೆ 8ಕ್ಕೆ ಮುಖ್ಯಮಂತ್ರಿ ಅವರ ಗೃಹಕಚೇರಿ ಕೃಷ್ಣದಲ್ಲಿ ಈ ಪರಿಹಾರ ಧನದ ಚೆಕ್ ಹಸ್ತಾಂತರ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net