

ಹರಿಯಾಣ: 4 ಟನ್ ಪಾಪಿ ಹಸ್ಕ್, ನಿಷೇಧಿತ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಹರಿಯಾಣದಲ್ಲಿ ತಡೆದ ರಾಜ್ಯದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಜಾರ್ಖಂಡ್ನ ಛತ್ರಾದಿಂದ ರಾಜಸ್ಥಾನದ ಜೋಧ್ಪುರಕ್ಕೆ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಅಕ್ರಮ ಸಾಗಣೆ ಮಾಡಲಾಗುತ್ತಿತ್ತು. ರಾಜಸ್ಥಾನ ನೋಂದಣಿ ಸಂಖ್ಯೆಯನ್ನು ಹೊಂದಿರುವ ಟ್ರಕ್ ಅನ್ನು ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ವೇ ಟೋಲ್ ಪ್ಲಾಜಾದಲ್ಲಿ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸರಕು ಪತ್ತೆಯಾಗಿದೆ.
ತಡೆಹಿಡಿದ ಬೆನ್ನಲ್ಲೇ ಪ್ರಕರಣವನ್ನು ದಾಖಲಿಸಲಾಗಿದ್ದು, ವಶಪಡಿಸಿಕೊಂಡ ಸಂಬಂಧ ಜೋಧ್ಪುರದ ನಿವಾಸಿಗಳಾದ ಇಬ್ಬರನ್ನು ಬಂಧಿಸಲಾಗಿದೆ. ಅವರ ಬಂಧನವು ಮಾದಕವಸ್ತು ಕಳ್ಳಸಾಗಣೆ ಜಾಲ ಮತ್ತು ಅದರ ಕಾರ್ಯಾಚರಣೆಗಳ ಬಗ್ಗೆ ಹೆಚ್ಚಿನ ಸುಳಿವು ನೀಡಬಹುದು ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).