ಸುಮಾರು 50 ಮಂದಿಯನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ಪ್ಯಾಸೆಂಜರ್​ ವಿಮಾನ ದಿಢೀರ್​ ನಾಪತ್ತೆ! Russian plane

Russian plane
Published on

Russian plane : ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ An-24 ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಪ್ರಸ್ತುತ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಲ್ಲಿನ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿಮಾನ ಹಾರಾಟದ ನಡುವೆಯೇ ವಾಯು ಸಂಚಾರ ನಿಯಂತ್ರಕರು ವಿಮಾನದೊಂದಿಗಿನ ಸಂಪರ್ಕವನ್ನು ಕಳೆದುಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಪತ್ತೆಯಾದ An-24 ಪ್ರಯಾಣಿಕ ವಿಮಾನ ಸೈಬೀರಿಯಾ ಮೂಲದ ಅಂಗಾರ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿತ್ತು. ಈ ವಿಮಾನವು ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣವನ್ನು ಸಮೀಪಿಸುವಾಗ ರಾಡಾರ್‌ನಿಂದ ಕಣ್ಮರೆಯಾಯಿತು ಎಂದು ಸ್ಥಳೀಯ ತುರ್ತು ಸಚಿವಾಲಯ ತಿಳಿಸಿದೆ.

ವಿಮಾನವನ್ನು ಹುಡುಕಲು ಅಗತ್ಯವಿರುವ ಎಲ್ಲಾ ಪಡೆಗಳು ಮತ್ತು ಸಂಪನ್ಮೂಲಗಳನ್ನು ನಿಯೋಜಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರು ಸಿಬ್ಬಂದಿ ಹಾಗೂ ಐದು ಮಕ್ಕಳು ಸೇರಿದಂತೆ 43 ಪ್ರಯಾಣಿಕರು ವಿಮಾನದಲ್ಲಿದ್ದರು ಎಂದು ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net