ಮಳೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ ಬಿಎಸ್‌ವೈ- ಯಾರ್‍ಯಾರಿಗೆ ಎಷ್ಟೆಷ್ಟು?

CM
Published on

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ರೂಪಾಯಿಗಳ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ಹಿಂದಿನ‌ ರೀತಿಯೇ ಪರಿಹಾರವನ್ನು ವಿತರಿಸುವಂತೆ ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂಪಾಯಿಗ ಜತೆ, ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂಪಾಯಿ, ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇದರ ಜತೆಗೆ, ಜಿಲ್ಲಾ ಕೇಂದ್ರಗಳ ಹಾಸ್ಟೆಲ್, ಶಾಲಾ ಕಾಲೇಜುಗಳು ಕರೊನಾ ವೈರಸ್‌ ಚಿಕಿತ್ಸಾ ಕೇಂದ್ರಗಳಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವುದರಿಂದ ಗ್ರಾಮಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾರ್ಪಡಿಸಿ ಅಗತ್ಯ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕಲ್ಲದೆ, ಪ್ರತಿದಿನ‌ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net