2021ರ ಗಣರಾಜ್ಯೋತ್ಸಕ್ಕೆ ಭಾರತಕ್ಕೆ ಅತಿಥಿಯಾಗಿ ಬರಲಿದ್ದಾರೆ ಈ ಪ್ರಧಾನಿ...

britan PM
Published on

ನವದೆಹಲಿ: ಕಳೆದ ಕೆಲ ವರ್ಷಗಳಿಂದ ಇಡೀ ವಿಶ್ವದ ಕಣ್ಣು ಭಾರತದತ್ತ ನೆಟ್ಟಿದೆ. ಅದೇ ರೀತಿ ಭಾರತದ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವಕ್ಕೆ ಅನೇಕ ದೇಶಗಳ ಪ್ರಧಾನಿ, ಅಧ್ಯಕ್ಷರು ಬರಲು ಉತ್ಸುಕತೆ ತೋರುತ್ತಿದ್ದಾರೆ. ಇದಾಗಲೇ ಕೆಲವು ದೇಶಗಳ ಗಣ್ಯರು ಆಗಮಿಸಿ ಭಾರತವನ್ನು ಕೊಂಡಾಡಿ ಹೋಗಿದ್ದೂ ಆಗಿದೆ.

ಇದೀಗ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರದಿ. 2021ರಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಬೋರಿಸ್ ಜಾನ್ಸನ್ ಮುಖ್ಯ ಅಥಿಯಾಗಿ ಭಾಗವಹಿಸಲಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡಾಮೆನಿಕ್​ ರಾವ್​ ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಚಿವ ಎಸ್. ಜೈಶಂಕರ್ ಜತೆಗಿನ ಮಾತುಕತೆ ಡಾಮೆನಿಕ್​ ಈ ವಿಷಯ ತಿಳಿಸಿದ್ದಾರೆ. ಮುಂದಿನ ಹೊಸ ವರ್ಷ ನಡೆಯಲಿರುವ ರಾಜ್ಯೋತ್ಸವಕ್ಕೆ ಮುಖ್ಯ ಅಥಿಯಾಗಿ ಭಾಗವಹಿಸಬೇಕು ಎಂಬ ಭಾರತದ ಆಹ್ವಾನವನ್ನು ಬೋರಿಸ್ ಜಾನ್ಸ್ ನ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ7ಶೃಂಗದ ಜತೆ ಕೈಜೋಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೋರಿಸ್ ಜಾನ್ಸನ್ ಆಹ್ವಾನಿಸಿದ್ದಾರೆ. ಉಭಯ ದೇಶಗಳ ನಡುವೆ ಅಗತ್ಯವಿರುವ ದ್ವಿಪಕ್ಷೀಯ ಸಂಬಂಧದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಾಮೆನಿಕ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net