ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ: ಮೂವರ ದುರ್ಮರಣ- ಹಲವರಿಗೆ ಗಂಭೀರ ಗಾಯ

construction
Published on

ನವದೆಹಲಿ: ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಮೂರು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ.

ಕಟ್ಟಡವನ್ನು ನಿರ್ಮಾಣ ಮಾಡುತ್ತಿರುವಾಗಲೇ ಅದು ಕುಸಿದುಬಿದ್ದಿದೆ. ಈ ಸಂದರ್ಭದಲ್ಲಿ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಟ್ಟಡ ಬಿದ್ದ ಹಿನ್ನೆಲೆಯಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಮೂವರು ಮೃತಪಟ್ಟಿದ್ದು, ಕನಿಷ್ಠ ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕಳಪೆ ಗುಣಮಟ್ಟದ ಸಾಮಗ್ರಿ ಬಳಸಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಶಂಕೆ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕೆಲ ದಿನಗಳ ಹಿಂದೆ ಇಲ್ಲಿಯ ಮುಸ್ತಫಾಬಾದ್​ ನಗರದಲ್ಲಿಯೂ ಇಂಥದ್ದೇ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕಟ್ಟಡಗಳಿಗೆ ಬಳಸಲಾಗುತ್ತಿರುವ ಸಾಮಗ್ರಿಗಳ ಕುರಿತಂತೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net