ಕದನವಿರಾಮ ಉಲ್ಲಂಘಿಸಿ ಬಂದ ಐವರು ಪಾಕ್​ ಸೈನಿಕರನ್ನು ಸದೆಬಡಿದ ಯೋಧರು

pak
Published on

ಜಮ್ಮು: ಏನೇ ಪರಿಸ್ಥಿತಿ ಬಂದರೂ ಪಾಕಿಸ್ತಾನ ಮಾತ್ರ ತನ್ನ ಕುತಂತ್ರ ಬುದ್ಧಿ ಬಿಡುವಂತೆ ತೋರುತ್ತಿಲ್ಲ. ಇದಾಗಲೇ ನೂರಾರು ಬಾರಿ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬಂದಿದೆ. ನಿನ್ನೆ ಕೂಡ ಇದೇ ರೀತಿ ಪಾಕಿಸ್ತಾನದ ಸೈನಿಕರು ವಿರಾಮ ಉಲ್ಲಂಘಿಸಿ ಭಾರತದೊಳಗೆ ಪ್ರವೇಶಿಸುವ ಪ್ರಯತ್ನ ಮಾಡುತ್ತಿರುವಾಗ ಭಾರತೀಯ ಯೋಧರು ಅವರಿಗೆ ತಕ್ಕ ತಿರುಗೇಟು ನೀಡಿದ್ದಾರೆ.

ಜಮ್ಮುಕಾಶ್ಮೀರದ ಪೂಂಛ್​ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಬಂದ ಪಾಕಿಸ್ತಾನದ ಸೈನಿಕರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಐವರು ಪಾಕಿಸ್ತಾನದ ಸೈನಿಕರು

ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದ್ದು, ಎಲ್‌ಒಸಿಯ ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ನಾಗರಿಕರ ನಿವಾಸಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿತು. ಇದರಿಂದಾಗಿ ಆಸ್ತಿಪಾಸ್ತಿಗಳಿಗೆ ತೀವ್ರ ತರಹದ ಹಾನಿಯಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಎರಡೂ ಸೇನೆಗಳ ನಡುವೆ ಸುಮಾರು 2 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿರುವುದಾಗಿ ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net