ಸರ್ಕಾರಿ ಬಸ್​, ಗ್ಯಾಸ್ ಟ್ಯಾಂಕರ್​ ನಡುವೆ ಭೀಕರ ಅಪಘಾತ- 12 ಮಂದಿ ಸಾವು

accident
Published on

ಲಖನೌ: ಸರ್ಕಾರಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 12 ಮಂದಿ ಮೃತಪಟ್ಟಿರುವ ಭೀಕರ ಘಟನೆ ಸಂಭಾಲ್ ಜಿಲ್ಲೆಯ ಆಗ್ರಾಮುರ್ದಾಬಾದ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಧ್ಯಪ್ರದೇಶದ ಅಲಿಘರ್​ಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಟ್ರಕ್ ಸರ್ಕಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ದೇಹ ಕ್ಯಾಂಟರ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹೊರಕ್ಕೆ ತೆಗೆಯಲು ಶ್ರಮ ಪಡಬೇಕಾಯಿತು.

ನಸುಕಿನಲ್ಲಿ ಅಧಿಕ ಮಂಜು ಆವರಿಸಿದ್ದು, ರಸ್ತೆಯಲ್ಲಿ ವಾಹನಗಳು ಗೋಚರಿಸದ ಕಾರಣ ಎದುರು ಬದುರಾಗಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಬಹುತೇಕ ಮಂದಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಹಾಗೂ ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದೆ.

ಅಪಘಾತದಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟ್ಯಾಂಕರನ್​ ಮುಂಭಾಗ ಜಖಂ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net