ಟ್ರಕ್‌- ಬಸ್‌ ನಡುವೆ ಭೀಕರ ಅಪಘಾತ: 18 ಮಂದಿಯ ಸಾವು, ಹಲವರ ಸ್ಥಿತಿ ಗಂಭೀರ

accident
Published on

ಬರಾಬಂಕಿ (ಉತ್ತರಪ್ರದೇಶ): ಇಲ್ಲಿನ ರಾಮ್‌ಸ್ನೇಹಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಖನೌ - ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.

ವೇಗವಾಗಿ ಚಲಿಸುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಡಿ ಹಲವಾರು ಮಂದಿ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿರುವುದಾಗಿ ಲಖನೌ ವಲಯ ಎಡಿಜಿ ನಾರಾಯಣ್ ಸಬತ್ ಮಾಹಿತಿ ನೀಡಿದ್ದಾರೆ.

ಬಸ್ ಹರಿಯಾಣದಿಂದ ಬಿಹಾರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net