ಬಸ್ಸುಗಳ ನಡುವೆ ಡಿಕ್ಕಿ: ಎಂಟು ಮಂದಿ ಸ್ಥಳದಲ್ಲೇ ಸಾವು- ಮೂವರ ಸ್ಥಿತಿ ಚಿಂತಾಜನಕ

accident
Published on

ಪೂರ್ವಾಂಚಲ್ (ಉತ್ತರ ಪ್ರದೇಶ): ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿಯಾಗಿ, ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಡಬಲ್​ ಡೆಕ್ಕರ್​ ಎರಡೂ ಬಸ್ಸುಗಳು ಬಿಹಾರದಿಂದ ದೆಹಲಿಗೆ ಹೊರಟಿದ್ದವು. ಲೋನಿಕ್ತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ ಪೊಲೀಸರು.

8 Killed, Several Injured in Collision Of Double-Decker Buses On UP

ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಖನೌದ ಟ್ರೋಮಾ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು .ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ ತಿಳಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗಿವೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net