ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಕಾರು: ಒಂದೇ ಕುಟುಂಬದ ಐವರ ದುರ್ಮರಣ

accident
Published on

ವಿಜಯವಾಡ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿಗೆ ಡಿಕ್ಕಿ ಹೊಡೆದಿದೆ. ನಾಗಾರ್ಜುನ ಸಾಗರ್ ಎಡದಂಡೆ ಕಾಲುವೆಯ ಮೇಲಿನ ಸೇತುವೆಯ ಮೇಲೆ ಈ ದುರ್ಘಟನೆ ಸಂಭವಿಸಿದೆ.

ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದ ಗಾಯಗೊಂಡವರನ್ನು ಜಗ್ಗಯ್ಯಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಆರು ತಿಂಗಳ ಮಗು ಮತ್ತು ಓರ್ವ ಪುರುಷ ಮೃತಪಟ್ಟಿದ್ದಾರೆ.

ಸಮಾರಂಭವೊಂದಕ್ಕೆ ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೆಂಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net