

ಬೆಳಗಾವಿ: ನಸುಕಿನಲ್ಲಿ ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿಯ ಮೂವರ ದುರ್ಮರಣಗೋವಾದಲ್ಲಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಮೂವರು ಪ್ರವಾಸಿಗರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗೋವಾದ ಮಾಪಸಾದ ಕುಚೇಲಿ ಬಳಿ ಘಟನೆ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ನಾಯರ್ ಅನಗೋಳ್ಕರ್ (28),ರೋಹಣ ಗದಗ(26) ಸನ್ನಿ ಅನ್ವೇಕರ್(31) ಎಂದು ಗುರುತಿಸಲಾಗಿದೆ.
ವಿಶಾಲ್ (27) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.