ಲಾರಿ, ಆಟೊ ನಡುವೆ ಭೀಕರ ರಸ್ತೆ ಅಪಘಾತ: ಏಳು ಮಂದಿ ದುರ್ಮರಣ

accident
Published on

ತೆಲಂಗಾಣ: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ. ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟವರೆಲ್ಲರೂ ಕಾರ್ಮಿಕರು ಎನ್ನಲಾಗಿದೆ.

ಘಟನೆಯಲ್ಲಿ ಹದಿಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಲಾರಿ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ 6.30ರ ಸುಮಾರಿಗೆ ಲಾರಿ ಹಾಗೂ ಪ್ಯಾಸೆಂಜರ್ ಆಟೋ ನಡುವೆ ಅಪಘಾತವಾಗಿದೆ. 20 ಕೃಷಿ ಕಾರ್ಮಿಕರನ್ನು ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದು, ಕೆಲಸ ಮುಗಿಸಿಕೊಂಡು ದೇವರಕೊಂಡದಿಂದ ವಾಪಸ್ ಮನೆಗೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ ಎಂದು ನಲಗೊಂಡ ಎಸ್ ಪಿ ರಂಗನಾಥ್ ವಿವರಣೆ ನೀಡಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net