ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 11 ಮಂದಿ ಸಾವು, 17 ಮಂದಿಗೆ ಗಂಭೀರ ಗಾಯ

accident
Published on

ವಡೋದರ (ಗುಜರಾತ್): ಇಂದು ನಸುಕಿನಲ್ಲಿಯೇ ಭೀಕರ ಅಪಘಾತ ನಡೆದು 11 ಮಂದಿ ಮೃತಪಟ್ಟು, 17 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್​ನ ವಡೋದರದಲ್ಲಿ ನಡೆದಿದೆ.

ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ವಡೋದರ ಹೈವೇ ರಸ್ತೆಯ ವಾಘೋಡಿಯಾ ಕ್ರಾಸಿಂಗ್ ಬಳಿ ಟ್ರಕ್​ಗಳು ಢಿಕ್ಕಿ ಹೊಡೆದಿವೆ.

ನಸುಕಿನ ಸುಮಾರು ಮೂರು ಗಂಟೆಗೆ ಈ ಘಟನೆ ನಡೆದಿದೆ. ಟ್ರಕ್ ನಲ್ಲಿದ್ದ ಪ್ರಯಣಿಕರೆಲ್ಲಾ ಸೂರತ್ ನಿಂದ ಪಾವಗಢದ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ವಡೋದರದ ಎಸ್ ಎಸ್ ಜಿ ಹಾಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯ್ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net