ನಟಿ ವಿಜಯಲಕ್ಷ್ಮಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಲು ಕಾರಣನಾಗಿದ್ದ ರಾಜಕೀಯ ಮುಖಂಡ ಅರೆಸ್ಟ್‌!

vijayalaksm
Published on

ಬೆಂಗಳೂರು: ನಟಿ ವಿಜಯಲಕ್ಷ್ಮಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತ ಪನನ್‌ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್‌ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

2020ರಲ್ಲಿ ನಟಿ ವಿಜಯಲಕ್ಷ್ಮಿ ಚೆನ್ನೈನಲ್ಲಿ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಆರೋಪಿಗಳ ತಲಾಶ್‌ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಈತ ಇರುವುದು ತಿಳಿದುಬಂದಿದ್ದರಿಂದ ಬೆಂಗಳೂರಿಗೆ ಬಂದ ಪೊಲೀಸರು ನಾಡಾರ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. ನಟಿಗೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.

ತಿರುನೆಲ್ವೇಲಿ ನಿವಾಸಿ ಹರಿ ನಾಡಾರ್‌ ಅಲಿಯಾಸ್‌ ಗೋಪಾಲಕೃಷ್ಣ ನಾಡಾರ್‌ (39) 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಲಗುಲಂ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ. ಉದ್ಯಮಿಯೋರ್ವರಿಗೆ 360 ಕೋಟಿ ರೂಪಾಯಿ ಬ್ಯಾಂಕ್‌ನಿಂದ ಸಾಲ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಈತನನ್ನು 2021 ಮೇ ನಲ್ಲಿ ಬೆಂಗಳೂರು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಬಳಿಕ ಆತನನ್ನು ಬಿಡುಗಡೆ ಮಾಡಲಾಗಿತ್ತು.

2020 ರಲ್ಲಿ  ವಿಜಯಲಕ್ಷ್ಮಿ ಆತ್ಮಹತ್ಯೆ ಯತ್ನ ಪ್ರಕರಣ ತನಿಖೆ ನಡೆಸುತ್ತಿದ್ದ ತಿರುವನ್‌ಮಿಯೂರ್‌ ಪೊಲೀಸರಿಗೆ ನಟಿ, ಈ ಹಿಂದೆ ತನ್ನೊಂದಿಗೆ ಸಂಬಂಧ ಹೊಂದಿದ್ದ ಎನ್‌ಟಿಕೆ ಮುಖಂಡ ಸೀಮನ್‌ ತನಗೆ ಕಿರುಕುಳ ನೀಡಲು ಹರಿ ನದರ್‌ನನ್ನು ಕಳಿಸಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ತಮಿಳುನಾಡಿನ ಕೋರ್ಟ್‌ ಮುಂದೆ ಆತನನ್ನು ಪೊಲೀಸರು ಹಾಜರುಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net