

ಭುವನೇಶ್ವರ: ಬೆಂಗಳೂರಿನಿಂದ ಕೋಲ್ಕತಾಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದ ನಿವಾಸಿ ತೈಮೂರ್ ಅಲಿ ಖಾನ್ (33) ಮೃತಪಟ್ಟವರು. ಇವರು ಏರ್ ಏಷಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಅಸ್ವಸ್ಥರಾದರು. ಕೂಡಲೇ ವಿಮಾನವನ್ನು ಭುವನೇಶ್ವರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನವನ್ನು ಭೂಸ್ಪರ್ಶ ಮಾಡಿಸಿ ಖಾನ್‌ರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಅವರು ಮೃತಪಟ್ಟಿದ್ದಾರೆ.