

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆ.4ರಂದು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರಿಗೆ ಮಂಗಳವಾರ ಉತ್ತರಿಸಿದ ಅವರು ಸಿಐಐ ಆಯೋಜಿಸಿರುವ ಸಿದ್ಧಿ- ಸಂಕಲ್ಪ ಕಾರ್ಯಕ್ರಮದಲ್ಲಿ ಷಾ ಪಾಲ್ಗೊಂಡು ದೆಹಲಿಗೆ ಮರಳಲಿದ್ದಾರೆ ಎಂದರು.
ಪರಾಮರ್ಶೆ: ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಪರಾಮರ್ಶೆ, ಮಂಕಿಫಾಕ್ಸ್ ರೋಗಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸುವುದಕ್ಕಾಗಿ ಇಂದು ಮಧ್ಯಾಹ್ನ ಎರಡು ಪ್ರತ್ಯೇಕ ಸಭೆಗಳನ್ನು ನಡೆಸುವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.