ವಿಶೇಷ ಸ್ಥಾನ ರದ್ದತಿ ಪರಿಣಾಮ? ಡಿಡಿಸಿ ಚುನಾವಣೆ- ಬಿಜೆಪಿ ಜಯಭೇರಿ; ಮೈತ್ರಿಕೂಟ ಫಸ್ಟ್​

BJP-jammu
Published on

ಶ್ರೀನಗರ: ಜಮ್ಮು- ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನದ ಕುರಿತಾಗಿ ವಿಶ್ಲೇಷಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ, ಅಚ್ಚರಿಯ ಬೆಳವಣಿಗೆಯಲ್ಲಿ ಇದೇ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಸಮಿತಿ (ಡಿಡಿಸಿ) ಚುನಾವಣೆಯಲ್ಲಿ ಪಕ್ಷವಾರು ಲೆಕ್ಕಾಚಾರದಲ್ಲಿ ಬಿಜೆಪಿ ನಂ.1 ಸ್ಥಾನದಲ್ಲಿದೆ. ಅತಿ ಹೆಚ್ಚು ಮತಗಳನ್ನು ಗಳಿಸುವ ಮೂಲಕ ನ್ಯಾಷನಲ್ ಕ್ಯಾನ್ಫೆರೆನ್ಸ್ ನೇತೃತ್ವದ ಗುಪ್ಕರ್ ಮೈತ್ರೂಟ ಮೇಲುಗೈ ಸಾಧಿಸಿದೆ. ಒಟ್ಟು 276 ಡಿಡಿಸಿ ಸ್ಥಾನಗಳ ಪೈಕಿ ಗುಪ್ಕರ್ ಮೈತ್ರಿಕೂಟದ ಪಕ್ಷಗಳು 112 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, 74 ಸ್ಥಾನಗಳಲ್ಲಿ ಜಯಗಳಿಸಿದೆ.‘

ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫೆರೆನ್ಸ್ ಪಕ್ಷ 67 ಸ್ಥಾನಗಳೊಂದಿಗೆ 2ನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ಗುಪ್ಕರ್ ಮೈತ್ರಿಕೂಟದ ಭಾಗವಾಗಿರುವ ಪಿಡಿಸಿ 27 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 49 ಸ್ಥಾನಗಳನ್ನು ಗೆದ್ದರೆ, ಮೆಹಬೂಬಾ ಮುಫ್ತಿಯ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 27 ಸ್ಥಾನಗಳನ್ನು ಗಳಿಸಿದೆ.

ಪಕ್ಷಾವಾರು ಲೆಕ್ಕಾಚಾರ ಹಾಕಿದಾಗ ಭಾರತೀಯ ಜನತಾಪಕ್ಷವೊಂದೇ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದಾಗಿ ತಜ್ಱರು ವಿಶ್ಲೇಷಿಸುತ್ತಿದ್ದಾರೆ.

ಇನ್ನುಳಿದಂತೆ ಕಾಂಗ್ರೆಸ್ ಇದುವರೆಗೆ 26 ಸ್ಥಾನಗಳನ್ನು ಗೆದ್ದಿದ್ದರೆ, ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷಕ್ಕೆ 12ಸ್ಥಾನಗಳು ಸಿಕ್ಕಿವೆ. ಸಿಪಿಐ (ಎಂ) 6, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ 5, ಜೆಕೆಪಿಎಂಗೆ 3, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂಥರ್ಸ್ 2 ಸ್ಥಾನಗಳನ್ನು ಗೆದ್ದಿವೆ. ಪಿಡಿಎಫ್ ಮತ್ತು ಬಹುಜನ ಸಮಾಜವಾದಿ ಪಕ್ಷಕ್ಕೆ (ಬಿಎಸ್‌ಪಿ) ತಲಾ ಒಂದು ಸ್ಥಾನ ಸಿಕ್ಕಿದೆ.

ಸುಚೇತ್‌ಗಢ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ಸಚಿವ ಶ್ಯಾಮ್ ಲಾಲ್ ಚೌಧರಿ ಕೇವಲ 11 ಮತಗಳಿಂದ ಸೋತಿದ್ದಾರೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net