ತೀವ್ರ ಎದೆನೋವು: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

annahazare1
Published on

ಪುಣೆ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ (84)ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿಯ ರೂಬಿ ಹಾಲ್ ಕ್ಲಿನಿಕ್‌ಗೆ ದಾಖಲು ಮಾಡಲಾಗಿದೆ. ಹೃದಯದ ಅಪಧಮನಿಯಲ್ಲಿನ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಸ್ಥಿರವಾಗಿದ್ದಾರೆ ಎಂದು ವೈದ್ಯ ಅವಧೂತ್ ಬೋದಮವಾಡ್ ಮಾಹಿತಿ ನೀಡಿದ್ದಾರೆ.

ಇನ್ನು ಎರಡು ಮೂರು ದಿನ ಅವರನ್ನು ಆಸ್ಪತ್ರೆಯಲ್ಲಿಯೇ ಇಟ್ಟುಕೊಂಡು ನಿಗಾ ವಹಿಸಲಾಗುತ್ತದೆ. ಸದ್ಯ ಆರೋಗ್ಯ ಚೆನ್ನಾಗಿ ಇರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಸಹ ನಡೆಸಿದ್ದರು. ಇದಕ್ಕೂ ಮುನ್ನ ಲೋಕಪಾಲ್​ ಮಸೂದೆ​​ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇವರು ಹೋರಾಟ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net