

ಗೋದಾವರಿ (ಆಂಧ್ರಪ್ರದೇಶ) : ಬಸ್‌ವೊಂದು ಸೇತುವೆಯಿಂದ ಉರುಳಿಬಿದ್ದು ಚಾಲಕ ಸೇರಿದಂತೆ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಇಲ್ಲಿಯ ಸರ್ಕಾರಿ ಬಸ್ ಸೇತುವೆಯಿಂದ 50 ಅಡಿ ಕೆಳಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಜಂಗಾರೆಡ್ಡಿಗುಡೆಂ ವಲಯದ ಜಲ್ಲೇರು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚು ಸಾಧ್ಯತೆ ಇದೆ. ಬಸ್ ವೇಲೇರುಪಾಡು ಕಡೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ನದಿಯಿಂದ ಹೊರಕ್ಕೆ ತೆಗೆಯುವ ಕಾರ್ ಭರದಿಂದ ಸಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಬಸ್ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಇನ್ನಷ್ಟೇ ವಿಚಾರ ಹೊರಬರಬೇಕಿದೆ.
ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ: