

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ನಡೆಯಲಿರುವ ಕಾಳಿ ಪೂಜೆಯ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿರುವ ಕೋಲ್ಕತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಕೋರಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ಉತ್ಸವಗಳನ್ನು ನಡೆಸುವುದು ಎಲ್ಲರಿಗೂ ಮುಖ್ಯ. ಆದರೆ ಅದಕ್ಕಿಂತ ಮುಖ್ಯವಾದದ್ದು ಮನುಷ್ಯನ ಜೀವ. ಮನುಷ್ಯನ ಪ್ರಾಣ ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೋಲ್ಕೊತಾ ಕೋರ್ಟ್ ತೀರ್ಪು ನೀಡಿದೆ. ಕರೊನಾ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಪರಿಸರ ಮಾಲಿನ್ಯದಿಂದ ಮನುಷ್ಯರ ಮೇಲೆ ಆಗುವ ಅನಾಹುತ ತಡೆಗಟ್ಟುವುದೇ ಮುಖ್ಯ. ಆದ್ದರಿಂದ ಹೈಕೋರ್ಟ್ ತೀರ್ಪಿಗೆ ತಡೆ ನೀಡಲಾಗದು ಎಂದಿದೆ.
ಇದನ್ನೂ ಓದಿ: ಉಗ್ರ ಸಂಘಟನೆಯೊಂದಿಗೆ ಲಿಂಕ್: ಶಿರಸಿ ಮೂಲದ ಯುವಕನ ಬಂಧನ
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗೌತಮ್ ರಾಯ್ ಮತ್ತು ಬುರ್ರಾ ಬಜಾರ್ ಪಟಾಕಿ ಮಾಲೀಕರ ಸಂಘ ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ.