ಬಿ.ಎಡ್​ ಕೋರ್ಸ್ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್​ನ್ಯೂಸ್: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

BED1
Published on

ಬೆಂಗಳೂರು : 2020-21ನೇ ಸಾಲಿನ ಎರಡು ವರ್ಷಗಳ ಬಿ.ಎಡ್​ ಕೋರ್ಸ್​ಗೆ ಸೇರಲು ಬಯಸುವವರಿಗೆ ಅರ್ಜಿ ಸಲ್ಲಿಸಲು ಈ ಮೊದಲು ನಿಗದಿ ಮಾಡಲಾಗಿದ್ದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಅಂತಿಮ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದ್ದು, ಈ ಮೂಲಕ ಕೋರ್ಸ್ ಸೇರಬಯಸುವವರಿಗೆ ಇನ್ನು ಮೂರು ದಿನಗಳ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2020-21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯ ಸರ್ಕಾರಿ, ಮಾನ್ಯ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ ಮೂಲಕ ದಿನಾಂಕ 13-01-2021ರಿಂದ 26-01-2021ರವರೆಗೆ ಆಹ್ವಾನಿಸಲಾಗಿತ್ತು. ಆದರೆ ಈಗ ಅವಧಿಯನ್ನು 31ರವರೆಗೆ ವಿಸ್ತರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ವೆಬ್ ಸೈಟ್​ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಓದಿಕೊಂಡು, ಕ್ರಮಬದ್ಧವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅಧಿಕೃತ ವೆಬ್​ಸೈಟ್​ http://www.schooleducation.kar.nic.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net