

ಭಾರತ ಸರ್ಕಾರ ರಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನ ಪೋಟ್ಬ್ಲೇರ್, ಅಕೋರ್ನಂ, ಕೊಚ್ಚಿ, ಗೋವಾ, ಮುಂಬೈ ಶಾಖೆಗಳಲ್ಲಿ ಖಾಲಿಯಿರುವ ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)10 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ವಿಭಾಗದಿಂದ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
10 ಸ್ಥಾನದಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗೆ 8 ಸ್ಥಾನ, ಎಸ್ಟಿ 1 ಹಾಗೂ ಇಡಬ್ಯ್ಲುಎಸ್ಗೆ 1 ಸ್ಥಾನ ಮೀಸಲಿರಿಸಲಾಗಿದೆ. 1.5.2022ಕ್ಕೆ ಅನ್ವಯವಾಗುವಂತೆ ಗರಿಷ್ಠ 32 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇದೆ.
ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್/ಇ ಆ್ಯಂಡ್ ಟಿ/ಟೆಲಿಕಮ್ಯುನಿಕೇಶನ್ನಲ್ಲಿ ಶೇ.55 ಅಂಕಗಳೊಂದಿಗೆ ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು.
ವೇತನ: 3 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮೊದಲ ವರ್ಷ ಮಾಸಿಕ 40,000 ರೂ. ವೇತನ ಇರಲಿದೆ. 3ನೇ ವರ್ಷ 55,000 ರೂ. ನೀಡಲಾಗುವುದು.
ನೇಮಕಾತಿ: ಅರ್ಹತಾ ಪರಿೆಯಲ್ಲಿ ಶಾರ್ಟ್ಲಿಸ್ಟ್ ಮಾಡಲಾದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಅಹ್ವಾನಿಸಲಾಗುವುದು.
ಅರ್ಜಿ ಸಲ್ಲಿಕೆ: ಆಸಕ್ತ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳ ಪ್ರತಿ ಲಗತ್ತಿಸಿ ಡೆಪ್ಯೂಟಿ ಮ್ಯಾನೇಜರ್ (ಎಚ್ಆರ್/ಮಿಲಿಟರಿ ಕಮ್ಯುನಿಕೇಶನ್ಸ್ ಎಸ್ಬಿಯು) ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ , ಜಾಲಹಳ್ಳಿ ಪೋಸ್ಟ್, ಬೆಂಗಳೂರು& 5860013 ವಿಳಾಸಕ್ಕೆ ಅಂಚೆ ಮೂಲಕ ತಲುಪಿಸಬೇಕು. ಅಂಚೆ ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿರಬೇಕು.
ಅರ್ಜಿಶುಲ್ಕ: ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 400 +ಜಿಎಸ್ಟಿ. ಎಸ್ಟಿ ಮತ್ತು ಅಂವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28.06.2022
ಅಧಿಸೂಚನೆಗೆ: https://bit.ly/3HuywNj
ಹೆಚ್ಚಿನ ಮಾಹಿತಿಗಾಗಿ:hrmilcom@bel.co.in