ಭಾರತ ಬಂದ್‌: ಅಕ್ಕಮಹಾದೇವಿ ಮಹಿಳಾ ವಿವಿ ಪರೀಕ್ಷೆ ಮುಂದೂಡಿಕೆ

exam
Published on

ವಿಜಯಪುರ: ಇಂದು ಭಾರತ ಬಂದ್ ಹಿನ್ನೆಲೆಯಲ್ಲಿ ಇಂದು (ಸೋಮವಾರ) ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ನಾತಕ/ಸ್ನಾತಕೋತ್ತರ ಹಾಗೂ ಬಿಎಡ್ ಕೋರ್ಸ್‌ಗಳ ಪರೀಕ್ಷೆ ಇಂದು ನಡೆಯಬೇಕಿದ್ದು ಅವುಗಳನ್ನು ಮುಂದೂಡಲಾಗಿದೆ.

ಭಾರತ ಬಂದ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ಹೇಳಿದೆ.

ಬಿಎಡ್ ವಿದ್ಯಾರ್ಥಿಗಳಿಗೆ ಇಂದು ನಡೆಯಬೇಕಿದ್ದ ಪರೀಕ್ಷೆ ನಾಳೆ ನಡೆಸಲು ನಿರ್ಧರಿಸಲಾಗಿದ್ದು, ಸ್ನಾತಕ/ಸ್ನಾತಕೋತ್ತರ ವಿದ್ಯಾರ್ಥಿಗಳ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕ ನಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net