

ಲಖನೌ (ಉತ್ತರ ಪ್ರದೇಶ): ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಧ್ವಜಗಳ ಕಾಣಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನಕ್ಕೆ ಒಳಗಾಗಿರುವ ಹಾಗೂ ಅಚ್ಚರಿಯಿಂದ ನೋಡುತ್ತಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖನೌನಲ್ಲಿ ನಡೆದಿದೆ. ಇಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಈ ಘಟನೆ ನಡೆದಿದೆ.
ಇದರ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಈ ವೈರಲ್ ವಿಡಿಯೋದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಬಿಜೆಪಿ ಧ್ವಜಗಳು ಇರುವುದನ್ನು ನಾವು ನೋಡಬಹುದಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಕಚೇರಿಯನ್ನು ಒಳಹೊಕ್ಕಾಗಿ ಒಂದು ಕಡೆಗಳಲ್ಲಿ ಅನೇಕ ಬಿಜೆಪಿ ಧ್ವಜಗಳು ಇರುವುದನ್ನು ನೋಡಿ ಕಂಗಾಲಾಗಿದ್ದಾರೆ. ಇದನ್ನು ಅವರು ಆಶ್ಚರ್ಯದಿಂದ ನೋಡುತ್ತಿರುವ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದು.
ಇತ್ತ, ಕಾಂಗ್ರೆಸ್ ಕಚೇರಿ ಪದಾಧಿಕಾರಿಗಳು ಈ ಬಗ್ಗೆ ಯಾವುದೇ ಸೂಕ್ತವಾದ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಧ್ವಜಗಳು ಕಚೇರಿಯ ಒಳಗೆ ಹೇಗೆ ಬಂತು ಎಂದು ಕೇಳಿದ ಪ್ರಶ್ನೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಮೌನವೇ ಉತ್ತರವಾಗಿದೆ. ಆದರೆ, ಯುವ ಮುಖಂಡರೊಬ್ಬರು ಈ ಕುರಿತು ಮಾತನಾಡಿ, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದೇವೆ. ಇದು ಕೆಲ ಅಪರಿಚಿತರ ಕಿಡಿಗೇಡಿತನ ಇರಬೇಕೆಂದು ತಿಳಿಸಿದ್ದಾರೆ. (ಏಜೆನ್ಸೀಸ್)
ಇಲ್ಲಿದೆ ನೋಡಿ ವಿಡಿಯೋ