ಅರ್ನಬ್‌ ಗೋಸ್ವಾಮಿ ಬಂಧನದ ವಿರುದ್ಧ ಪ್ರತಿಭಟನೆ: ಬಿಜೆಪಿ ಮುಖಂಡರ ಬಂಧನ

arrest
Published on

ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ವಿರುದ್ಧ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ದೆಹಲಿಯ ರಾಜ್‌ಘಾಟ್‌ನ ಸಮೀಪ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದ ಸಮೀಪ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಧರಣಿ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ.

ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯ

ಒಬ್ಬ ಪತ್ರಕರ್ತನನ್ನ ಮಾತ್ರ ಬಂಧಿಸಲಾಗಿಲ್ಲ, ಸರ್ಕಾರವನ್ನು ಪ್ರಶ್ನಿಸಿದ ಕಾರಣ ಅವರ ಕುಟುಂಬ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ ಸರ್ಕಾರ ಮಾಡಿದ ಗೋಸ್ವಾಮಿ ವಿರುದ್ಧದ ಈ ದೌರ್ಜನ್ಯಕ್ಕೆ ನಮ್ಮ ವಿರೋಧವಿದೆ ಎಂದು ಕಪಿಲ್‌ ಮಿಶ್ರಾ ಹೇಳಿದರು.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದ ಮೇಲೆ ಅರ್ನಬ್‌ ಗೋಸ್ವಾಮಿ ಅವರನ್ನು ಕಳೆದ ವಾರ ಬಂಧಿಸಲಾಗಿದೆ. ಅವರನ್ನು ಸ್ಥಳೀಯ ನ್ಯಾಯಾಲಯ ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net