ಸಾಲಬಾಧೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ವಿಜಯಪುರದ ಬಿಎಸ್‌ಎಫ್ ಯೋಧ

revanasidda
Published on

ವಿಜಯಪುರ: ಜೀವನದಲ್ಲಿ ಜಿಗುಪ್ಸೆ ಹೊಂದಿ ನಿವೃತ್ತ ಬಿಎಸ್‌ಎಫ್ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ.

ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದ ನಿವಾಸಿ ರೇವಣ್ಣಸಿದ್ದ ಗಾಣಿಗೇರ ನೇಣಿಗೆ ಶರಣಾಗಿದ್ದಾರೆ. ಇವರು ಸಾಲಬಾಧೆಯಿಂದ ಮಾನಸಿಕವಾಗಿ ಮನನೊಂದು ಕೊಂಡಿದ್ದರು ಎನ್ನಲಾಗಿದೆ.

ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್‌)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net