

ಬೆಂಗಳೂರು: ಈಗಾಗಲೇ ಹಲವಾರು ಶಾಲೆಗಳಲ್ಲಿ ಕರೊನಾ ವೈರಸ್ ಹಿನ್ನೆಲೆಯಲ್ಲಿ ಶಿಕ್ಷಕರಿಗೂ ಮನೆಯಿಂದಲೇ ಪಾಠ ಮಾಡುವ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂತರ ಹಲವು ಶಾಲೆಗಳ ಶಿಕ್ಷಕರು ಇದೀಗ ಶಾಲೆಗೆ ಬಂದು ಕಾರ್ಯ ಆರಂಭಿಸಿದ್ದಾರೆ.
ಈ ನಡುವೆಯೇ .ರಾಜ್ಯ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಅದೇನೆಂದರೆ ಕಾಲೇಜು ಭೋದಕರಿಗೆ ಇಂದಿನಿಂದ ಅಂದರೆ ನವೆಂಬರ್ 4ರಿಂದ ನವೆಂಬರ್ 11ರವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ತಿಳಿಸಿದೆ. ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಪ್ರಾಂಶುಪಾಲರು ಸೂಚಿಸಿದ ಬೋಧಕರು ಕಾಲೇಜಗಳಲ್ಲಿನ ತುರ್ತು ಕೆಲಸಗಳನ್ನು ನಿರ್ವಹಿಸಲು ಪರೀಕ್ಷಾ ಕಾರ್ಯಗಳಿದ್ದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆಯೂ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.