ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ಸಾವು- ಬಲಿ ಪಡೆದ ಕರೊನಾ ಸೋಂಕು

congress
Published on

ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಎಂಟು ಹಂತಗಳಲ್ಲಿ ಇದು ಅಂತಿಮಗೊಳ್ಳಲಿದೆ.

ಈ ನಡುವೆಯೇ ಕರೊನಾ ಸೋಂಕಿನಿಂದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಶಂಶೇರ್ ಗಂಜ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರೆಜೌಲ್​ ಹಖ್​ ಕರೊನಾಕ್ಕೆ ಬಲಿಯಾಗಿದ್ದಾರೆ. ಏಪ್ರಿಲ್​ 26ರಂದು ಈ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಈ ನಡುವೆಯೇ ಇವರನ್ನು ಕರೊನಾ ಬಲಿ ಪಡೆದಿದೆ.

ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಹಖ್​ ಅವರಿಗೆ ಕೆಲ ದಿನಗಳಲ್ಲಿ ಆರೋಗ್ಯ ಸ್ಥಿತಿ ಸರಿಯಾಗಿರಲಿಲ್ಲ. ಪರೀಕ್ಷೆ ಮಾಡಿಸಿಕೊಂಡಾಗ ಕರೊನಾ ಪಾಸಿಟಿವ್​ ಇರುವುದು ತಿಳಿದಿತ್ತು. 2-3 ದಿನಗಳಿಂದ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿತ್ತು.

ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಿದೆ ಇಂದು ಮುಂಜಾನೆ 5 ಗಂಟೆ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net