

ಅಹಮದಾಬಾದ್: ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರ ತಂದೆ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭರತ್ ಪಟೇಲ್ ಅವರಿಗೆ ಕರೊನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿರುವುದಾಗಿ ಮೂಲಗಳು ಹೇಳಿವೆ.
ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಮಾಜಿ ಡೆಪ್ಯುಟಿ ಮುನ್ಸಪಲ್ ಕಮಿಷನರ್ ಆಗಿದ್ದ ಝಡ್‌ಎ ಸಾಚಾ ಹಾಗೂ ಹಿರಿಯ ಪತ್ರಕರ್ತ ಮನೀಶ್ ಮಕ್ವಾನ್ ಕೂಡ ಅಹಮದಾಬಾದ್‌ನಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.