

ಮುಂಬೈ: ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಟಾರ್ ಪ್ಲಸ್ನ 'ಯೆ ರಿಷ್ತಾ ಕ್ಯಾ ಕೆಹಲಾತಾ ಹೈ' ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ದಿವ್ಯಾ ಮನೆಮಾತಾಗಿರುವ ನಟಿ.
ಅವರ ಆಮ್ಲಜನಕದ ಮಟ್ಟವು ಕುಸಿಯುತ್ತಿದ್ದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ ವೈದ್ಯರು. ಮಗಳಿಗೆ ಅನೇಕ ದಿನಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತಿತ್ತು. ಇದೀಗ ಕರೊನಾ ವೈರಸ್ ತಗುಲಿದ ಮೇಲೆ ಪರಿಸ್ಥಿತಿ ಹದಗೆಟ್ಟಿದೆ ಎಂದು ಈಚೆಗಷ್ಟೇ ದಿವ್ಯಾ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಅನಾರೋಗ್ಯದ ಸಮಸ್ಯೆ ಕಾಡುತ್ತಿದ್ದುದರಿಂದ ಆಕ್ಸಿಮೀಟರ್ ಖರೀದಿಸದ್ದು. ನಂತರ ಆಮ್ಲಜನಕ 71ಕ್ಕೆ ಇಳಿದಿರುವುದು ತಿಳಿದುಬಂದಿತ್ತು. ಇದರಿಂದ ಮಗಳು ತುಂಬಾ ಚಿಂತಿತಳಾಗಿದ್ದಳು. ಇದೀಗ ಕರೊನಾವೂ ಸೇರಿಕೊಂಡಿರುವ ಕಾರಣ, ಅವಳ ಪಾಡು ಹೇಳತೀರದು ಎಂದು ನಟಿಯ ತಾಯಿ ದುಃಖತೋಡಿಕೊಂಡಿದ್ದಾರೆ.
ನಟಿ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಜತೆಗೆ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿಕೊಳ್ಳಿ ಎಂದು ನಟಿ ದಿವ್ಯಾ ಕೂಡ ಇನ್ಸ್ಟಾಗ್ರಾಂನಲ್ಲಿ ಕೇಳಿಕೊಂಡಿದ್ದಾರೆ.