ಕರೊನಾಕ್ಕೆ ಬಲಿಯಾದ ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಶಿವಶಂಕರ್‌ ಮಾಸ್ಟರ್‌

shivashankar
Published on

ಹೈದರಾಬಾದ್: ರಾಷ್ಟ್ರ ಪ್ರಶಸ್ತಿ ವಿಜೇತ, ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇವರಿಗೆ 73 ವರ್ಷ ವಯಸ್ಸಾಗಿತ್ತು. ಮಗಧೀರ ಚಿತ್ರದ ಧೀರ ಧೀರ.. ಹಾಡಿನ ನೃತ್ಯ ಸಂಯೋಜನೆಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು.

ಕರೊನಾ ಸೋಂಕಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇವರನ್ನು ಹೈದರಾಬಾದ್‍ನ ಗಚ್ಚಿಬೌಲಿ ಎಐಜಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಶ್ವಾಸಕೋಶದಲ್ಲಿ ಸಂಪೂರ್ಣವಾಗಿ ಸೋಂಕು ವ್ಯಾಪಿಸಿದ್ದರಿಂದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ತೆಲುಗು ಮತ್ತು ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 800 ಚಿತ್ರಗಳ ಹಾಡುಗಳಿಗೆ ಶಿವಶಂಕರ್ ನೃತ್ಯ ಸಂಯೋಜನೆ ಮಾಡಿದ್ದಾರೆ. 2011 ರಲ್ಲಿ ಮಗಧೀರ ಚಿತ್ರದ ಧೀರ ಧೀರ.. ಹಾಡಿನ ಮೂಲಕ ಇವರು ಮನೆಮಾತಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net