ಲಂಚ ಪ್ರಕರಣದಲ್ಲಿ ಬಂಧನ: ಜೈಲಿನಲ್ಲೇ ತಹಶೀಲ್ದಾರ್​ ಆತ್ಮಹತ್ಯೆ

suicide
Published on

ಹೈದರಾಬಾದ್: ಐದು ಕೋಟಿ ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧಿತರಾಗಿದ್ದ ತಹಶೀಲ್ದಾರ್​ ಒಬ್ಬರು ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರ್ವಾ ಬಸವರಾಜು ನಾಗರಾಜು ಎನ್ನುವ ತಹಶೀಲ್ದಾರ್​ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದ್​ನ ಚಂಚಲಗೂಡ ಜೈಲಿನಲ್ಲೇ ಈ ಘಟನೆ ಸಂಭವಿಸಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮುಂದಿನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net