68 ಮಂದಿಯನ್ನು ಬಲಿ ಪಡೆದ ಸಿಡಿಲು: ಸೆಲ್ಫಿ ತೆಗೆದುಕೊಳ್ಳುವಾಗ 11 ಮಂದಿಯ ಸಾವು!

death
Published on

ಜೈಪುರ: ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಸುರಿದ ಭಾರಿ ಮಳೆಯಲ್ಲಿ ಸಿಡಿಲಿಗೆ 68 ಮಂದಿ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಜೈಪುರದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ ಭಯಭೀತರಾಗಿ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ.

ಈ ಟವರ್​ ಮೇಲೆ 27 ಜನರು ಇದ್ದರು. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಇನ್ನು ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಸಿಡಿಲಿಗೆ 41 ಮಂದಿ ಬಲಿಯಾಗಿದ್ದರೆ, ಮಧ್ಯಪ್ರದೇಶದಲ್ಲಿ ಏಳು ಜನರು, ರಾಜಸ್ಥಾನದಲ್ಲಿ 20 ಮಂದಿ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net