

ಮುಂಬೈ: ಮಹಾರಾಷ್ಟ್ರ ಸರ್ಕಾರವನ್ನು ಅಲ್ಲೋಲ ಕಲ್ಲೋಲ ಮಾಡಿರುವ ಶಿವಸೇನಾ ಮುಖಂಡ ಏಕನಾಥ್ ಶಿಂಧೆಗೆ ಬಿಗ್ ಶಾಕ್ ಎದುರಾಗಿದೆ.
ಸುಮಾರು 13 ಶಾಸಕರನ್ನು ಕರೆದುಕೊಂಡು ಗುಜರಾತಿನ ಸೂರತ್ ಪಟ್ಟಣದ ಹೋಟೆಲ್ ಒಂದರಲ್ಲಿ ಬೀಡುಬಿಟ್ಟಿರುವ ಶಿಂಧೆಯನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಸೆವ್ರಿ ಶಾಸಕ ಅಜಯ್ ಚೌಧರಿರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸಿ ಶಿವಸೇನಾ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಶಿಂಧೆಗೆ ಭಾರಿ ಹಿನ್ನಡೆಯಾಗಿದೆ.
ಮಹಾರಾಷ್ಟ್ರದಲ್ಲಿ ಸದ್ಯ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದೆ. ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ ಸರ್ಕಾರಕ್ಕೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಬೆಂಬಲ ನೀಡಿವೆ. ಮಹಾರಾಷ್ಟ್ರ ಅಘಾಡಿಯ ಬುಡವನ್ನು ಅಲ್ಲಾಡಿಸುವಂಥ ಕೃತ್ಯಕ್ಕೆ ಏಕನಾಥ್ ಕೈ ಹಾಕಿದ್ದಾರೆ ಎಂಬ ಮಾಹಿತಿಯಿದೆ.
ಶಿಂಧೆ ಓರ್ವ ಮಾಸ್ ಲೀಡರ್. ಬಿಜೆಪಿಯಿಂದಿಗಿನ ಮೈತ್ರಿಯನ್ನು ಮುರಿದುಕೊಂಡ ಬಳಿಕ 2014ರಲ್ಲೇ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಶಿಂಧೆ ಹೆಸರು ಸೂಚಿಸಲಾಗಿತ್ತು. ಯಾವಾಗ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯಾಯಿತೋ ಆಗ ಶಿಂಧೆ ಅವರನ್ನು ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ ಸಚಿವರಾಗಿ ನೇಮಕ ಮಾಡಲಾಯಿತು. ಇದಾದ ಬಳಿಕ ತನ್ನನ್ನು ತೆರೆ ಮರೆಗೆ ಸರಿಸುತ್ತಿದ್ದರೆ ಎಂಬ ಭಾವನೆ ಶಿಂಧೆ ಅವರಿಗೆ ಕಾಡತೊಡಗಿದ್ದು, ಇದರಿಂದ ಅಸಮಾಧಾನಗೊಂಡಿರುವ ಶಿಂಧೆ 10 ಶಾಸಕರೊಂದಿಗೆ ಸೂರತ್ಗೆ ಎಸ್ಕೇಪ್ ಆಗಿದ್ದಾರೆ.
ಅಷ್ಟಕ್ಕೂ ಶಿಂಧೆ ಅವರ ಕೋಪಕ್ಕೆ ಕಾರಣವಾದದ್ದು, ಅವರೇ ಹೇಳುವಂತೆ ಶಿವಸೇನೆಯಲ್ಲಿ ಯಾವುದೇ ಪ್ರಮುಖ ನೀತಿಗಳು, ಯೋಜನೆಗಳು ಮತ್ತು ಕಾರ್ಯತಂತ್ರಗಳನ್ನು ರೂಪಿಸುವಾಗ ತಮ್ಮನ್ನು ಲೆಕ್ಕಕ್ಕೇ ತೆಗೆದುಕೊಳ್ಳುತ್ತಿರಲಿಲ್ಲ ಎಂಬುದು. ಅಷ್ಟೇ ಅಲ್ಲದೇ, ಇತ್ತೀಚಿಗೆ ನಡೆದ ಠಾಣೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಿವಸೇನೆಯು ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಬೇಕು ಎಂದು ಶಿಂಧೆ ಪ್ರಸ್ತಾಪಿಸಿದ್ದರು. ಆದರೆ ಈ ಮಾತಿಗೆ ಮನ್ನಣೆ ಸಿಕ್ಕಿರಲಿಲ್ಲ. ಕಾಂಗ್ರೆಸ್ ಮತ್ತು ಎನ್ ಸಿಪಿ ಜೊತೆಗೆ ಮೈತ್ರಿಯಾಗಿ ಅಖಾಡಕ್ಕೆ ಇಳಿದಿತ್ತು ಶಿವಸೇನೆ. ಇದು ಶಿಂಧೆ ಅವರ ಆಕ್ರೋಶಕ್ಕೆ ಕಾರಣವಾಗಿತ್ತು.
ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ, ಕಲ್ಯಾಣ್ ಕ್ಷೇತ್ರದ ಸಂಸದರಾಗಿದ್ದಾರೆ. ಏಕನಾಥ್ ಶಿಂಧೆ 2004, 2009, 2014 ಹಾಗೂ 2019ರಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2014ರಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿ ಮುರಿದ ಬಳಿಕ ಶಿವಸೇನಾದಿಂದ ವಿಪಕ್ಷ ನಾಯಕರಾಗಿ ಏಕನಾಥ್ ಶಿಂಧೆ ಕಾರ್ಯನಿರ್ವಹಿಸಿದ್ದರು. ಕೊಲಂಬಿಯಾದಲ್ಲಿ ಮೊದಲ ಬಾರಿಗೆ ಕಮ್ಯೂನಿಸ್ಟ್ ಆಡಳಿತ; ಗುಸ್ಟಾವೊ ಪೆಟ್ರೋ- ಪರಿಚಯ ಮಹಾ ವಿಕಾಸ್ ಅಘಾಡಿ ಆರಂಭಿಸಿ, ಹೊಸ ಸರ್ಕಾರ ಉದಯವಾದ ಬಳಿಕ ಶಿಂಧೆಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ದೊರೆತ್ತಿತ್ತು.