ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: ಪೈಲಟ್​ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

vimana
Published on

ಕೋಯಿಕ್ಕೋಡ್ : ಏರ್​ಇಂಡಿಯಾ ಎಕ್ಸ್​ಪ್ರೆಸ್ ವಿಮಾನದ ಕಾರ್ಗೋ ಕಂಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕ ಎದುರಿಸಿರುವ ಘಟನೆ ಕೇರಳದ ಕೋಯಿಕ್ಕೋಡ್​ನಲ್ಲಿ ನಡೆದಿದೆ.

ಪೈಲಟ್​ನ ಸಮಯಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಜೀವ ಸಹಿತ ಪಾರಾಗಿದ್ದಾರೆ.

ಬೆಂಕಿ ತಗುಲಿರುವುದು ತಿಳಿಯುತ್ತಲೇ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ ಪೈಲಟ್​. ಸದ್ಯ ವಿಮಾನದಲ್ಲಿದ್ದವರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ವಿಮಾನ ಕಲ್ಲಿಕೋಟೆಯಿಂದ ಕುವೈತ್​ಗೆ ಹೊರಟಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net