

ಮುಂಬೈ: ಶಿಥಿಲಾವಸ್ಥೆಯಲ್ಲಿ ಇದ್ದ ನಾಲ್ಕು ಅಂತಸ್ತುಗಳ ಕಟ್ಟಡವೊಂದು ಕುಸಿದು ಬಿದ್ದು ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ಇರುವ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ, ಗಾಯಗಳಾಗಿರುವ ಬಗ್ಗೆ ವರದಿ ಆಗಿಲ್ಲ.
ಕಟ್ಟಡ ಕುಸಿತದ ವಿಷಯ ತಿಳಿಯುತ್ತಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ಶಿಥಿಲಗೊಂಡಿದ್ದ ಈ ಕಟ್ಟಡ ಬೀಳುವ ಹಂತದಲ್ಲಿದ್ದ ಹಿನ್ನೆಲೆಯಲ್ಲಿ ಜನರನ್ನು ಖಾಲಿ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ಬರಬೇಕಿದೆ. ಅಗ್ನಿಶಾಮಕದಳದ ವಾಹನ ಹಾಗೂ ಆ್ಯಂಬುಲೆನ್ಸ್ ಘಟನಾ ಸ್ಥಳದಲ್ಲಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. (ಏಜೆನ್ಸೀಸ್)
ಕಟ್ಟಡ ಕುಸಿತದ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅದರ ದೃಶ್ಯ ಇಲ್ಲಿದೆ: