

ಕೋಲ್ಕತಾ: ಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕರೊನಾ ಲಸಿಕೆ ನೀಡಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಹೇಳಿದ್ದಾರೆ.
ಪೊಲೀಸರು, ಗೃಹರಕ್ಷಕ ದಳದವರು, ಸ್ವಯಂಸೇವಕರು, ವಿಪತ್ತು ನಿರ್ವಹಣಾ ಸಿಬ್ಬಂದಿ- ಇವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಅವರು ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತಿರುವುದರ ಬಗ್ಗೆ ನಮಗೆ ಸಂತೋಷವಾಗಿದೆ ಎಂದು ಅವರು ತಿಳಿಸಿದ್ದಾರೆ. ಆರಂಭಿಕ ಹಂತದಲ್ಲಿ ಜ.14ರೊಳಗೆ ಆರೋಗ್ಯ ಕಾರ್ಯಕರ್ತರಿಗೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದೀಗ ಭಾರಿ ಟೀಕೆಗೆ ಗುರಿಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂಗಾಳದ ಜನತೆಗೆ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಆಡಳಿತಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಈ ವ್ಯವಸ್ಥೆ ಮಾಡುತ್ತಿದೆ ಪ್ರತಿಪಕ್ಷಗಳು ಟೀಕೆ ಮಾಡಿವೆ.
ಕೇರಳ, ತಮಿಳುನಾಡು, ಮಧ್ಯ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು, ತಮ್ಮ ಜನರಿಗೆ ಉಚಿತವಾಗಿ ಕೋವಿಡ್-19 ಲಸಿಕೆ ನೀಡುವುದಾಗಿ ತಿಳಿಸಿವೆ. ಜನವರಿ 16 ರಿಂದ ದೇಶದಲ್ಲಿ ಕೋವಿಡ್-19 ಲಸಿಕೆ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.