ಕೆಲಸ ಕೊಡಿಸುವುದಾಗಿ ಕರೆಸಿ ರೈಲು ನಿಲ್ದಾಣದಲ್ಲಿಯೇ ಅಧಿಕಾರಿಗಳಿಂದ ಗ್ಯಾಂಗ್​ರೇಪ್​!

rape
Published on

ಲಖನೌ: ಕೆಲಸ ಕೊಡಿಸುವ ಆಮಿಷ ಒಡ್ಡಿ, 22 ವರ್ಷದ ಯುವತಿಯ ಮೇಲೆ ರೈಲ್ವೆ ಅಧಿಕಾರಿಯೊಬ್ಬ ತನ್ನ ಸ್ನೇಹಿತರ ಜತೆಗೂಡಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಭೋಪಾಲ್‍ನ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ 45 ವರ್ಷದ ರಾಜೇಶ್ ತಿವಾರಿಯನ್ನು ಬಂಧಿಸಲಾಗಿದೆ. ಭೋಪಾಲ್ ರೈಲ್ವೆ ವಿಭಾಗದ ಸೆಕ್ಯೂರಿಟಿ ಕೌನ್ಸೆಲರ್, ವಿಪತ್ತು ನಿರ್ವಹಣಾ ಉಸ್ತುವಾರಿ ಹಾಗೂ ಮತ್ತೊಬ್ಬ ರೈಲ್ವೆ ಅಧಿಕಾರಿಯನ್ನು ಬಂಧಿಸಲಾಗಿದೆ.

ಯುವತಿ ಉತ್ತರ ಪ್ರದೇಶದ ಮಾಹೋಬ್‍ನ ಯುವತಿಯ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು ಭೋಪಾಲ್ ಸೂಪರಿಂಟೆಂಡೆಂಟ್ ಆಫ್ ರೈಲ್ವೆ ಪೊಲೀಸ್ (ಎಸ್‍ಆರ್ ಪಿ) ಹಿತೇಶ್ ಚೌಧರಿ ಮಾಹಿತಿ ನೀಡಿದ್ದಾರೆ.

ತಿವಾರಿ ಯುವತಿಯ ಫೇಸ್​ಬುಕ್​ ಸ್ನೇಹಿತನಾಗಿದ್ದ. ಇಬ್ಬರ ನಡುವೆ ಮಾತುಕತೆ ನಡೆದಿದೆ. ಈ ಸಂದರ್ಭದಲ್ಲಿ ಯುವತಿ ತನಗೆ ಕೆಲಸದ ಅವಶ್ಯಕತೆ ಇರುವುದಾಗಿ ಹೇಳಿದ್ದಾಳೆ. ನಂತರ ತಿವಾರಿ ಕೆಲಸ ಕೊಡಿಸುವುದಾಗಿ ಭೋಪಾಲ್ ರೈಲ್ವೆ ನಿಲ್ದಾಣದ ಪ್ರದೇಶಕ್ಕೆ ಕರೆಸಿಕೊಂಡಿದ್ದ.

ಆಕೆ ರೈಲ್ವೆ ನಿಲ್ದಾಣಕ್ಕೆ ಬಂದಾಗ ವೆಸ್ಟ್ ಸೆಂಟ್ರಲ್ ರೈಲ್ವೆ ಕಚೇರಿಯ ಮೊದಲ ಮಹಡಿಯಲ್ಲಿನ ರೂಮಿನಲ್ಲಿ ಆಕೆಯನ್ನು ಕೂಡಿ ಹಾಕಲಾಗಿದೆ. ನಂತರ ಆತ ಸ್ನೇಹಿತರ ಜತೆಗೆ ರೂಮಿಗೆ ಬಂದು ಮತ್ತು ಬರುವ ಔಷಧಿ ಬೆರೆಸಿದ ಪಾನೀಯವನ್ನು ನೀಡಿದ್ದಾನೆ. ನಂತರ ಎಲ್ಲರೂ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ತನ್ನ ದೂರಿನಲ್ಲಿ ಆರೋಪಿಸಿರುವುದಾಗಿ ಚೌಧರಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಲಾಗಿದೆ. ತಿವಾರಿಯನ್ನು ಇದಾಗಲೇ ಆರೋಪಿ ಎಂದು ಗೊತ್ತುಮಾಡಲಾಗಿದ್ದು, ಇನ್ನೊಬ್ಬ ಅಧಿಕಾರಿಯನ್ನು ಯುವತಿ ಗುರುತಿಸಲು ಕಾಯುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net